ಶಾರದಾ ಭಟ್ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ನೀಡಿ ಗೌರವ..!


ಕುಮಟಾ : ಪ್ರಸಕ್ತ ಸಾಲಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೊಡಮಾಡುವ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಕುಮಟಾ ತಾಲೂಕಿನ ಕೂಜಳ್ಳಿಯ ನಿವೃತ್ತ ಶಿಕ್ಷಕಿ ಶಾರದಾ ಕೃಷ್ಣಮೂರ್ತಿ ಭಟ್ಟ ಆಯ್ಕೆಯಾಗಿದ್ದಾರೆ . ಇವರು ಸುದೀರ್ಘ 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಮುಖ್ಯಾಧ್ಯಾಪಕಿಯಾಗಿ ನಿವೃತ್ತಿಯಾಗಿದ್ದಾರೆ .

ಇವರಿಗೆ 1997 ರಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ 2001 ರಲ್ಲಿ ರಾಷ್ಟ್ರ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಸಿಕ್ಕಿದೆ
ಇವರು ರಚಿಸಿದ ನಾಟಕ , ಭಜನೆ , ಚುಟುಕು ಒಳಗೊಂಡ ಒಟ್ಟೂ 9 ಕೃತಿಗಳು ಈಗಾಗಲೇ ಬಿಡುಗಡೆಯಾಗಿದ್ದು , ಸದ್ಯ ಒಂದು ಕೃತಿ ಬಿಡುಗಡೆ ಹಂತದಲ್ಲಿದೆ . ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಸಲ್ಲಿಸಿರುವ ಸೇವೆ , ಶಿಕ್ಷಣ , ಸಾಮಾಜಿಕ , ಸಾಹಿತ್ಯ ಕ್ಷೇತ್ರದಲ್ಲಿ ಇವರು ಸಾದನೆ ಗುರುತಿಸಿ , ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2022 ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ . ಮಾ . 8 ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ .

WhatsApp
Facebook
Telegram
error: Content is protected !!
Scroll to Top