ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಆದಿತ್ಯರಾವ್​ಗೆ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್.!

ಮಂಗಳೂರು: ಮಂಗಳೂರು ಏರ್ ಪೋರ್ಟ್ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ‌ ಆದಿತ್ಯರಾವ್ಗೆ ಶಿಕ್ಷೆ ವಿಧಿಸಿ ಮಂಗಳೂರು ಕೋರ್ಟ್ ತೀರ್ಪು ನೀಡಿದೆ. ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟಗೊಂಡಿದೆ. ನ್ಯಾಯಾಲಯ ಪ್ರಕರಣದಲ್ಲಿ ಪ್ರತ್ಯೇಕ ಎರಡು ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಆದಿತ್ಯ ರಾವ್​ಗೆ 25 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಮಂಗಳೂರು ಕೋರ್ಟ್, ಒಂದು ಸೆಕ್ಷನ್ ನಡಿ 20 ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದು ಮತ್ತೊಂದು ಸೆಕ್ಷನ್ ನಡಿ 5 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿ ಆದಿತ್ಯ 2020ರ ಜನವರಿ 20ರಂದು ಮಂಗಳೂರು ಏರ್ ಪೋರ್ಟ್ಗೆ ಬಾಂಬ್ ಇಟ್ಟಿದ್ದ. ಆ ಬಳಿಕ ಜನವರಿ 22ರಂದು ಬೆಂಗಳೂರಿನಲ್ಲಿ ಶರಣಾಗಿದ್ದ. ಉಡುಪಿ‌ ಜಿಲ್ಲೆಯ ಮಣಿಪಾಲ ಮೂಲದ ಆದಿತ್ಯ ರಾವ್, ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರನಾಗಿದ್ದ. 2018ರಲ್ಲಿ ಬೆಂಗಳೂರು ಏರ್ ಪೋರ್ಟ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ಅರ್ಜಿ ತಿರಸ್ಕೃತಗೊಂಡಿತ್ತು. ತನ್ನ ಅರ್ಜಿ ತಿರಸ್ಕೃತವಾಗಿದ್ದಕ್ಕೂ ಆದಿತ್ಯ ರಾವ್ಗೆ ಆಕ್ರೋಶವಿತ್ತು. ಹೀಗಾಗಿ ಅನೇಕ ಬಾರಿ ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ ಮಾಡಿದ್ದ. ಬಳಿಕ ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ. ಈ ಕೇಸ್ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.

WhatsApp
Facebook
Telegram
error: Content is protected !!
Scroll to Top