HAL Recruitment 2022: ಮಾಸಿಕ ವೇತನ ₹ 23,000, HALನಲ್ಲಿ Part-Time ಹುದ್ದೆ ಖಾಲಿ, ಅರ್ಜಿ ಸಲ್ಲಿಸಲು ಹೀಗೆ ಮಾಡಿ

HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 Part-Time ಡಾಕ್ಟರ್​ ಹುದ್ದೆ ಖಾಲಿ ಇದ್ದು, ಎಂಬಿಬಿಎಸ್​(MBBS) ಪದವೀಧರರು ಅರ್ಜಿ ಸಲ್ಲಿಸಬಹುದು. ಜನವರಿ 10, 2022 ರಂದು ನೇರ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.


ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿ HAL ಆಸ್ಪತ್ರೆ ನಾಸಿಕ್​​ನಲ್ಲಿ 4 ಗಂಟೆಗಳ ಕರ್ತವ್ಯ ನಿರ್ವಹಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್
ಹುದ್ದೆಯ ಹೆಸರುPart-Time ಡಾಕ್ಟರ್
ಒಟ್ಟು ಹುದ್ದೆ1
ವಿದ್ಯಾರ್ಹತೆಎಂಬಿಬಿಎಸ್​
ವೇತನಮಾಸಿಕ ₹23,010
ಉದ್ಯೋಗದ ಸ್ಥಳನಾಸಿಕ್​
ಸಂದರ್ಶನ ನಡೆಯುವ ದಿನಾಂಕ10/01/2022
ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ ನೇಮಕಾತಿ ಅಧಿಸೂಚನೆ ಪ್ರಕಾರ, Part-Time ಡಾಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು MCI ನೋಂದಣಿಯೊಂದಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಎಂಬಿಬಿಎಸ್​ ಪೂರ್ಣಗೊಳಿಸಿರಬೇಕು. ಮೇಲೆ ಸೂಚಿಸಿದ ನಿಯಮಿತ/ಪೂರ್ಣ ಸಮಯದ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾರ್ಟ್ ಟೈಮ್/ಕರೆಸ್ಪಾಂಡೆನ್ಸ್/ದೂರ ಶಿಕ್ಷಣ/ಇ-ಲರ್ನಿಂಗ್ ಕೋರ್ಸ್ ಮೂಲಕ ಪಡೆದ ವಿದ್ಯಾರ್ಹತೆಗಳು ಅರ್ಜಿ ಸಲ್ಲಿಸಲು ಅರ್ಹವಾಗಿರುವುದಿಲ್ಲ.
WhatsApp
Facebook
Telegram
error: Content is protected !!
Scroll to Top