NCDIR Recruitment 2022: ಬೆಂಗಳೂರಿನಲ್ಲಿ 15 ಹುದ್ದೆಗಳು ಖಾಲಿ, ಮಾಸಿಕ ವೇತನ ₹ 42,000

ಜನವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

NCDIR

NCDIR

NCDIR Recruitment 2022: ರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರ(The National Centre for Disease Informatics and Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 15 ಪ್ರಾಜೆಕ್ಟ್​ ಸೈಂಟಿಸ್ಟ್​, ರಿಸರ್ಚ್​ ಅಸೋಸಿಯೇಟ್, ಕಂಪ್ಯೂಟರ್ ಪ್ರೋಗ್ರಾಮರ್(Computer Programmer Posts) ಮತ್ತು ಇತರೆ ಹುದ್ದೆಗಳು ಖಾಲಿ ಇದ್ದು, ಸ್ನಾತಕೋತ್ತರ ಪದವಿ(Master’s Degree), ಪಿಎಚ್​.ಡಿ ಪೂರ್ಣಗೊಳಿಸಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಉದ್ಯೋಗಾಂಕ್ಷಿಗಳು(Job Seekers) ಹೆಚ್ಚಿನ ಮಾಹಿತಿಗಾಗಿ NCDIRನ ಅಧಿಕೃತ ವೆಬ್​ಸೈಟ್ www.ncdirindia.orgಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರ
ಹುದ್ದೆಯ ಹೆಸರುಪ್ರಾಜೆಕ್ಟ್​ ಸೈಂಟಿಸ್ಟ್​, ರಿಸರ್ಚ್​ ಅಸೋಸಿಯೇಟ್, ಕಂಪ್ಯೂಟರ್ ಪ್ರೋಗ್ರಾಮರ್
ಒಟ್ಟು ಹುದ್ದೆಗಳು15
ವಿದ್ಯಾರ್ಹತೆಸ್ನಾತಕೋತ್ತರ ಪದವಿ, ಪಿಎಚ್​ಡಿ.
ಉದ್ಯೋಗದ ಸ್ಥಳಬೆಂಗಳೂರು
ಸಂಬಳಮಾಸಿಕ ₹42,000
ವಯೋಮಿತಿ21-32 ವರ್ಷ
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ05/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ24/01/2022

ವಿದ್ಯಾರ್ಹತೆ:
ರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಸೈಂಟಿಸ್ಟ್​, ರಿಸರ್ಚ್​ ಅಸೋಸಿಯೇಟ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ (UR), OBC ಮತ್ತು EWS ಅಭ್ಯರ್ಥಿಗಳಿಗೆ- 1000 ರೂ.
SC/ ST/ PWD ಅಭ್ಯರ್ಥಿಗಳಿಗೆ 100 ರೂ.
ಪಾವತಿ ವಿಧಾನ: ನೆಟ್ ಬ್ಯಾಂಕಿಂಗ್/UPI/ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್

ವಯೋಮಿತಿ:
ಕನಿಷ್ಠ ವಯಸ್ಸು: 21 ವರ್ಷಗಳು
ಗರಿಷ್ಠ ವಯಸ್ಸು: 32 ವರ್ಷಗಳು
ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಟಿಫಿಕೇಶನ್​ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/01/2022

WhatsApp
Facebook
Telegram
error: Content is protected !!
Scroll to Top