Bengaluru Jobs: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ C-DAC Bengaluru, ಈಗಲೇ ಅಪ್ಲೈ ಮಾಡಿ

ಜನವರಿ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

C-DAC Bengaluru Recruitment 2022: ಸೆಂಟರ್ ಫಾರ್ ಡೆವಲಪ್​ಮೆಂಟ್​ ಆಫ್​ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (Center for Development of Advanced Computing -CDAC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 130 ಟೆಕ್ನಿಕಲ್ ಅಸಿಸ್ಟೆಂಟ್, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಪ್ರಾಜೆಕ್ಟ್​ ಎಂಜಿನಿಯರ್ ಮತ್ತು ಇತರೆ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಧಿಕೃತ ವೆಬ್​ಸೈಟ್​ cdac.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಸೆಂಟರ್ ಫಾರ್ ಡೆವಲಪ್​ಮೆಂಟ್​ ಆಫ್​ ಅಡ್ವಾನ್ಸ್ಡ್ ಕಂಪ್ಯೂಟಿಂಗ್
ಹುದ್ದೆಯ ಹೆಸರುಟೆಕ್ನಿಕಲ್ ಅಸಿಸ್ಟೆಂಟ್, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಪ್ರಾಜೆಕ್ಟ್​ ಎಂಜಿನಿಯರ್
ಒಟ್ಟು ಹುದ್ದೆಗಳು130
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ06/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18/01/2022
ಅರ್ಜಿ ಸಲ್ಲಿಸಲು ಲಿಂಕ್cdac.in

ಹುದ್ದೆಯ ಮಾಹಿತಿ:
ಟೆಕ್ನಿಕಲ್ ಅಸಿಸ್ಟೆಂಟ್-1
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್-5
ಪ್ರಾಜೆಕ್ಟ್​ ಎಂಜಿನಿಯರ್- 53
ಸೀನಿಯರ್ ಪ್ರಾಜೆಕ್ಟ್​ ಎಂಜಿನಿಯರ್-55
ಪ್ರಾಜೆಕ್ಟ್​ ಮ್ಯಾನೇಜರ್-1
C-DAC ಅಡ್ಜಂಕ್ಟ್​ ಎಂಜಿನಿಯರ್-4

ಅರ್ಹತಾ ಮಾನದಂಡ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳು ಲಭ್ಯವಿರುವ ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಟೆಕ್ನಿಕಲ್ ಅಸಿಸ್ಟೆಂಟ್​, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- ಲಿಖಿತ ಪರೀಕ್ಷೆ . ಪರೀಕ್ಷೆಯು ಇಂಗ್ಲೀಷ್​, ತಾರ್ಕಿಕತೆ, ಸಂಖ್ಯಾತ್ಮಕ ಸಾಮರ್ಥ್ಯ ಮತ್ತು ಡೊಮೈನ್ ಜ್ಞಾನ, ಇತ್ಯಾದಿಗಳನ್ನು ಒಳಗೊಂಡಿರುವ ವಸ್ತುನಿಷ್ಠ ಪ್ರಕಾರವಾಗಿದೆ.

ಪ್ರಾಜೆಕ್ಟ್ ಇಂಜಿನಿಯರ್: ಸ್ಕ್ರೀನಿಂಗ್, ಲಿಖಿತ ಪರೀಕ್ಷೆ (ತಾಂತ್ರಿಕ) ಮತ್ತು ಸಂದರ್ಶನ

ಹಿರಿಯ ಪ್ರಾಜೆಕ್ಟ್ ಇಂಜಿನಿಯರ್: ಸ್ಕ್ರೀನಿಂಗ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನ

C-DAC ಅಡ್ಜಂಕ್ಟ್ ಇಂಜಿನಿಯರ್: ಸ್ಕ್ರೀನಿಂಗ್ ಮತ್ತು ಸಂದರ್ಶನ

ಅರ್ಜಿ ಶುಲ್ಕ:

ಅರ್ಜಿ ಶುಲ್ಕವು ₹ 500/- ಆಗಿದೆ. SC/ST/PWD/EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/01/2022

WhatsApp
Facebook
Telegram
error: Content is protected !!
Scroll to Top