ಕೊರೊನಾ ನಿಯಮಾವಳಿಯಲ್ಲೆ ಗಣರಾಜ್ಯೋತ್ಸವ : ಕೇವಲ 200 ಜನರಿಗಷ್ಟೆ ಅವಕಾಶ ಸಹಾಯಕ ಆಯುಕ್ತೆ ಮಮತಾ ದೇವಿ ಹೇಳಿಕೆ

ಭಟ್ಕಳ: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವಕ್ಕೆ 200 ಜನರಿಗೆ ಸೀಮಿತವಾಗಿ ತಾಲೂಕು ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸ ಲಾಗಿದೆ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ ಹೇಳಿದರು.


ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಧ್ವಜಾರೋಹಣದ ನಂತರ ನಡೆಯುವ ಪಥಸಂಚಲವನ್ನು ರದ್ದುಪಡಿಸಲಾಗಿದೆ. ಈ ಬಾರಿ ಧ್ವಜಾರೋಹಣದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಿಲ್ಲ. ಕೊರೊನಾ ಸೋಂಕಿನ ವಿರುದ್ಧ ಹೋರಾಡಿದ ಹಾಗೂ ಕಲೆ,ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದೆ ಒಟ್ಟಾರೆ ಕೊರೊನಾ ನಿಯಮಾವಳಿಯಲ್ಲೆ ಗಣರಾಜ್ಯೋತ್ಸವ ಆಚರಿಸಲಾಗುವುದು ಎಂದು ಹೇಳಿದರು

ಪೂರ್ವಭಾವಿ ಸಭೆಯಲ್ಲಿ ತಹಶಿಲ್ದಾರ್‌ ರವಿಚಂದ್ರ ಎಸ್, ಪುರಸಭೆ ಮುಖ್ಯಾಧಿಕಾರಿ ರಾಧಿಕಾ ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಮುಂತಾದವರು ಉಪಸ್ಥಿತರಿದ್ದರು ಇದ್ದರು.

WhatsApp
Facebook
Telegram
error: Content is protected !!
Scroll to Top