Gold Price Today: ಇಳಿಕೆಯಾದ ಚಿನ್ನದ ಬೆಲೆ, ಆಭರಣ ಖರೀದಿಸಲು ಇದೇ ಸರಿಯಾದ ಸಮಯ..!

ಬಂಗಾರದ ಬೆಲೆ ದೇಶದಲ್ಲಿ ಇಳಿಕೆಯಾದಂತೆ, ಬೆಳ್ಳಿ ದರ (Silver Rate) ಸಹ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,200 ರೂ. ಇತ್ತು. ಇಂದು 1,000 ರೂ. ಕಡಿಮೆಯಾಗಿ 63,200 ರೂ. ಆಗಿದೆ.

Gold Rate on Jan 28, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಕಡಿಮೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,900 ರೂ. ಇತ್ತು. ಇಂದು 400 ರೂ. ಕಡಿಮೆಯಾಗಿ 45,500 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,830 ರೂ. ಇತ್ತು. ಇಂದು  190 ರೂ. ಕಡಿಮೆಯಾಗಿ 49,640 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 50,100 ರೂ. ಇತ್ತು. ಇಂದು 460 ರೂ. ಇಳಿಕೆಯಾಗಿ 49,640 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 45,900 ರೂ. ಇತ್ತು. ಇಂದು 400 ರೂ. ಇಳಿಕೆಯಾಗಿ 45,500 ರೂ. ಆಗಿದೆ. ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಭಾರತದಲ್ಲಿ ಆಭರಣ ಪ್ರಿಯರ ಜನಸಂಖ್ಯೆ ಕಡಿಮೆ ಏನಿಲ್ಲ. ಕೆಲವರು ಚಿನ್ನ, ಬೆಳ್ಳಿ ಆಭರಣಗಳನ್ನು ಧರಿಸಲು ಮಾಡಿಸಿಕೊಳ್ಳುತ್ತಾರೆ. ಇನ್ನೊಂದೆಡೆ, ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಾಟ ಮಾಡಲು ಬೇಕಾಗುತ್ತದೆಂದು ಅದರ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಸಹ ಇನ್ನೂ ಕಡಿಮೆಯಾಗಿಲ್ಲ.

ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24  ಕ್ಯಾರೆಟ್‌ ಚಿನ್ನದ ಬೆಲೆ 50 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋ ನಗರಗಳಾದ ಚೆನ್ನೈನಲ್ಲಿ 49,900 ರೂ. ಇದ್ದರೆ, ಮುಂಬೈನಲ್ಲಿ 49,640 ರೂ., ದೆಹಲಿಯಲ್ಲಿ 49,650 ರೂ. ಹಾಗೂ ಕೋಲ್ಕತ್ತದಲ್ಲಿ 48,200 ರೂ. ಇದೆ.
ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.

ಇಂದಿನ ಬೆಳ್ಳಿ ದರ:

ಬಂಗಾರದ ಬೆಲೆ ದೇಶದಲ್ಲಿ ಇಳಿಕೆಯಾದಂತೆ, ಬೆಳ್ಳಿ ದರ (Silver Rate) ಸಹ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,200 ರೂ. ಇತ್ತು. ಇಂದು 1,000  ರೂ. ಕಡಿಮೆಯಾಗಿ 63,200 ರೂ. ಆಗಿದೆ.

ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ 67,700 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 67,700 ರೂ. ಆಗಿದೆ.
ಇನ್ನು, ಮೆಟ್ರೋ ನಗರಗಳಾದ ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ 63,200 ರೂ. ದರ ಇದೆ.

ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ – ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

WhatsApp
Facebook
Telegram
error: Content is protected !!
Scroll to Top