Hijab Controversy: 3 ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ: ನಾಳೆ ಮತ್ತೆ ಹೈಕೋರ್ಟ್ನಲ್ಲಿ ವಿಚಾರಣೆ

ಮುಂಜಾಗ್ರತ ಕ್ರಮವಾಗಿ ನಾಳೆಯಿಂದ 3 ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆಯಿಂದ ಮೂರು ದಿನಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ತಿಳಿಸಿದರು.

ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ವರ್ಸಸ್ ಕೇಸರಿ ಶಾಲು ((Hijab v/s Saffron Shawl)  ಜಟಾಪಟಿ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಂಡು ರಾಜ್ಯದ ಹಲವು ಜಿಲ್ಲೆಗಳಿಗೆ ಹಬ್ಬಿದೆ. ಇಂದು ಹಲವೆಡೆ ಪ್ರತಿಭಟನೆಗಳು, ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್, ನಿಷೇಧಾಜ್ಞೆ ಮೊರೆ ಹೋಗಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ನಾಳೆಯಿಂದ 3 ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆಯಿಂದ ಮೂರು ದಿನಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ತಿಳಿಸಿದರು. ಇನ್ನು ಜಿಜಾಬ್ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ (Karnataka High court) ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಮುಂದಿನ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ

ಮೂರು ದಿನಗಳ ಕಾಲ ಹೈಸ್ಕೂಲು-ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ತಿಳಿಸಿದರು. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಈ ಆದೇಶ ಬಂದಿದೆ. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಟ್ವೀಟ್ ಮೂಲಕ ಮನವಿ ಮಾಡಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿ,  ಎಲ್ಲರೂ ಸಹಕರಿಸುವಂತೆ ಕೋರಿದ್ದಾರೆ.

ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ. ಮುಖ್ಯಮಂತ್ರಿ ಬೊಮ್ಮಾಯಿ

WhatsApp
Facebook
Telegram
error: Content is protected !!
Scroll to Top