ಧ್ವಜದ ಬಗ್ಗೆ ಕೊಟ್ಟ ಹೇಳಿಕೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸ ;ನಿರ್ಲಕ್ಷ್ಯಕ್ಕೆ ಮಾವಿನಭಾವಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಅಮಾನತು..!

ರಾಜ್ಯ(ರಾಯಚೂರು): ಕೆ.ಎಸ್. ಈಶ್ವರಪ್ಪ ಧ್ವಜದ ಬಗ್ಗೆ ಕೊಟ್ಟ ಹೇಳಿಕೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಹೇಳಿಕೆ ಖಂಡಿಸಿ ಕಾಂಗ್ರೆಸ್ ಹೋರಾಟ ನಡೆಸುತ್ತಿದ್ದು ವಜಾ ಮಾಡುವಂತೆ ಪಟ್ಟು ಹಿಡಿದು ಕೂತಿದೆ. ಇದರ ನಡುವೆ ರಾಯಚೂರು ಜಿಲ್ಲೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ. ಈ ಸಂಬಂಧ ಲಿಂಗಸುಗೂರು ತಾಲೂಕಿನ ಮಾವಿನಭಾವಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಹುಸೇನಪ್ಪನನ್ನು ಅಮಾನತು ಮಾಡಲಾಗಿದೆ.

ನಿನ್ನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮಾವಿನಭಾವಿ ಗ್ರಾಮ ಪಂಚಾಯಿತಿ ಮುಂದೆ ರಾತ್ರಿಯಿಡೀ ಧ್ವಜ ಹಾರಾಡಿದೆ. ಸಂಜೆ ಧ್ವಜ ಇಳಿಸದೇ ನಿರ್ಲಕ್ಷ ತೋರಿದ್ದ ಗ್ರಾಮ ಪಂಚಾಯಿತಿ ಸಿಬ್ಬಂದಿ ಹುಸೇನಪ್ಪನನ್ನು ಅಮಾನತುಗೊಳಿಸಲಾಗಿದೆ.

ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ

ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್​ ಧರಣಿ ನಡೆಸುತ್ತಿದೆ. ವಿಧಾನಸೌಧ ಹಾಗೂ ವಿಧಾನ ಪರಿಷತ್​ನಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ, ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ಇಂದು (ಫೆಬ್ರವರಿ 21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ.

ಈಶ್ವರಪ್ಪ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಧರಣಿ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಅಹೋರಾತ್ರಿ ಧರಣಿಗೆ ಸರ್ಕಾರ ಮಣಿಯುವ ಸೂಚನೆ ಇಲ್ಲ. ಸಚಿವ ಕೆ.ಎಸ್ ಈಶ್ವರಪ್ಪ ಕೇಸರಿ ಬಾವುಟವೇ ಮುಂದೊಂದು ದಿನ ರಾಷ್ಟ್ರಧ್ವಜ ಆಗಬಹುದು ಎಂಬ ಬಗ್ಗೆ ಹೇಳಿಕೆ ನೀಡಿದ್ದರು. ಈಗಲ್ಲ. 100, 200 ವರ್ಷಗಳ ನಂತರ ಹೀಗಾಗಬಹುದು ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಈ ಕುರಿತು ಕಾಂಗ್ರೆಸ್ ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿತ್ತು. ಇದೀಗ, ಅಹೋರಾತ್ರಿ ಧರಣಿ ಮುಂದುವರೆದಿದೆ.

WhatsApp
Facebook
Telegram
error: Content is protected !!
Scroll to Top