ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ದುರ್ಬಳಕೆ ತೆಡಯುವಂತೆ ಕೋರಿ ಎಸ್‌.ಎಸ್.ಎಫ್‌ ಸಂಘಟನೆಯಿಂದ ಭಟ್ಕಳ ತಹಶೀಲ್ದಾರ ಅವರಿಗೆ ಮನವಿ…!

ಭಟ್ಕಳ: ರಿಟ್‌ ಅರ್ಜಿ 2374/2022 ಸಂಬಂಧಿಸಿದ ಉಚ್ಚ ನ್ಯಾಯಾಲಯದ ಮಧ್ಯಾಂತರ ಆದೇಶದ ದುರ್ಬಳಕೆ ಮತ್ತು ಬಲವಂತ ಅನುಷ್ಟಾನಗೊಳಿಸುತ್ತಿರುವುದರ ವಿರೋಧಿಸಿ ಭಟ್ಕಳದ ತಹಶೀಲ್ದಾರ ಮೂಲಕ ರಾಜ್ಯಪಾರರಿಗೆ ಸುನ್ನಿ ಫೆಡರೇಶನ್‌ ನಿಂದ ಮನವಿ.

ರಿಟ್ ಅರ್ಜಿಗೆ ಸಂಬಂಧಿಸಿ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶವನ್ನು ಶಿಕ್ಷಣ ಇಲಾಖೆ ಮತ್ತು ಪೋಲೀಸ್ ಇಲಾಖೆ ತಪ್ಪಾಗಿ ಅರ್ಥೈಸಿಕೊಂಡಿಸಿವೆ .ಕರ್ನಾಟಕ ಉಚ್ಚ ನ್ಯಾಯಾಲಯ ತನ್ನ ಮಧ್ಯಂತರ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ . ಈ ಎಲ್ಲಾ ಅರ್ಜಿಗಳ ಬಾಕಿ ಉಳಿದಿರುವ ವಿಚಾರಣೆಯನ್ನು ಪರಿಗಣಿಸಿಕೊಂಡು ವಿದ್ಯಾರ್ಥಿಗಳು ಯಾವುದೇ ಧರ್ಮ ಅಥವಾ ನಂಬಿಕೆಯನ್ನು ಅನುಸರಿಸುವವರಾಗಿದ್ದರೂ ಕೇಸರಿ ಶಾಲು ( ಭಗವಾ ) ಶಿರವಸ್ತ್ರಗಳು ಧಾರ್ಮಿಕ ಧ್ವಜಗಳು ತರಗತಿಯೊಳಗೆ ಧರಿಸುವುದನ್ನು ಮುಂದಿನ ಆದೇಶದವರೆಗೆ ನಾವು ನಿರ್ಬಂಧಿಸುತ್ತೇವೆ .

ಕಾಲೇಜು ಅಭಿವೃದ್ಧಿ ಸಮಿತಿಗಳ ಮೂಲಕ ವಿದ್ಯಾರ್ಥಿಗಳ ವಸ್ತ್ರ ಸಂಹಿತ / ಸಮವಸ್ತ್ರವನ್ನು ನಿರ್ಧರಿಸಿರುವ ವಿದ್ಯಾ ಸಂಸ್ಥೆಗಳಿಗೆ ಮಾತ್ರವೇ ಈ ಆದೇಶ ಅನ್ವಯಿಸುತ್ತದೆ ಎಂಬುದನ್ನು ನಾವು ಸ್ಪಷ್ಟಪಡಿಸುತ್ತಿದ್ದೇವೆ.

ಮಧ್ಯಂತರ ಆದೇಶದ ಅಂಶವು ರಾಜ್ಯ ಸರಕಾರದ ಮೂಲಕ ಆದೇಶಿಸಿ ಅನುಷ್ಠಾನಗೊಳಿಸಲು ಆದೇಶ ಅಥವಾ ನಿರ್ದೇಶನ ನೀಡುವುದಿಲ್ಲ .ಆದೇಶವು ವಿಶೇಷವಾಗಿ ವಿದ್ಯಾರ್ಥಿಗಳ ವಸ್ತ್ರ ಸಂಹಿತ / ಸಮವಸ್ತ್ರವನ್ನು ಗೊತ್ತುಪಡಿಸಿರುವ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಮಾತ್ರ ಅನ್ವಯಿಸುತ್ತದೆ ಅದರ ಮೇಲೆ ಹೇಳಲಾದ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಶಿಕ್ಷಣ ಇಲಾಖೆಯು ಇದನ್ನು ಖಾಸಗಿ ಶಾಲೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸುತ್ತಿದೆ .

ಈಗಾಗಲೇ ಕಾಲೇಜು ಅಭಿವೃದ್ಧಿ ಸಮಿತಿಗಳ ಮೂಲಕ ತನ್ನ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಗೊತ್ತುಪಡಿಸಿರುವ ಸಂಸ್ಥೆಗಳಿಗೆ ಮಾತ್ರ ಈ ಆದೇಶ ನಿರ್ದೇಶನ ನೀಡುತ್ತದೆ . ಇದಲ್ಲದೇ ಉನ್ನತ ಶಿಕ್ಷಣ ಸಚಿವರಾದ ಮಾನ್ಯ ಅಶ್ವಥ ನಾರಾಯಣ ರವರು ಪದವಿ ತರಗತಿಯ ವಿದ್ಯಾರ್ಥಿನಿಯರಿಗೆ ಈ ನಿಯಮ ಸೇರಿರುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಈ ಆದೇಶದ ನೆಪದಲ್ಲಿ ಕೆಲವ ಹಿತಾಶಕ್ತಿಗಳು ಇದನ್ನು ಎಲ್ಲೆಡೆಯೂ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆಯ ಮೇಲೆ ಒತ್ತಡ ಹೇರುತ್ತಿದ್ದಾರೆ.

 ಪೋಲೀಸ್ ಅಧಿಕಾರಿಗಳು ಕೂಡಾ ತಮ್ಮ ಸಮವಸ್ತ್ರದಲ್ಲಿಯೇ ಶಾಲೆಗಳಿಗೆ ಭೇಟಿ ನೀಡಿ ಸಂವಿಧಾನದ ಹಕ್ಕುಗಳಿಗೆ ವಿರುದ್ಧವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ತಮ್ಮ ಹಿಜಾಬ್ ಕಳಚುವಂತೆ ನಿರ್ದೇಶನ ನೀಡಿರುವುದು ನಮ್ಮ ಗಮನಕ್ಕೆ ಬಂದಿದ ಮತ್ತು ಈ ವಿಚಾರ ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವಾಗಲೇ ಇಂತಹ ಕ್ರಮ ನಡೆದಿರುವುದು ಸಧರಿ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿರುತ್ತದೆ .

ಆದುದರಿಂದ ಸಂಬಂಧಿತ ಅಧಿಕಾರಿಗಳಿಗೆ ತಿಳಿಹೇಳುವಂತ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶಿರವಸ್ತ್ರದ ಹಕ್ಕನ್ನು ಬಲವಂತವಾಗಿ ಕಳಚಲು ಅನಿವಾರ್ಯ ಪಡಿಸದಂತ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕೆಂದು ನಾವು ತಮ್ಮಲ್ಲಿ ಮೂಲಕ ಕೋರಿಕೊಳ್ಳುತ್ತಿದ್ದೇವೆ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ತೊಂದರೆಯಾಗದಂತ ನೋಡಿಕೊಳ್ಳಬೇಕಾಗಿ ಎಂದು ಮನವಿ ಸಲ್ಲಿಸಿದ್ದರು. ಫೆಡರೇಶನ್‌ ಜಿಲ್ಲಾಧ್ಯಕ್ಷ ಆರಿಫ್‌ ಸಾದಿ ಹಾಗೂ ಸದಸ್ಯರು ಶಾಲಾ ವಿದ್ಯಾರ್ಥಿಗಳು ಇದ್ದರು.

WhatsApp
Facebook
Telegram
error: Content is protected !!
Scroll to Top