ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರವಿಚಂದ್ರನ್​ ತಾಯಿ ನಿಧನ: ಪಟ್ಟಮ್ಮಾಳ್​ ವೀರಸ್ವಾಮಿ ಇನ್ನಿಲ್ಲ.

ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್​ ವೀರಸ್ವಾಮಿ ಅವರು ಇಂದು (ಫೆ.28) ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಪಟ್ಟಮ್ಮಾಳ್​ ವೀರಸ್ವಾಮಿ ಅವರು ಕೊನೆಯುಸಿರು ಎಳೆದಿದ್ದಾರೆ. ರವಿಚಂದ್ರನ್​ ತಾಯಿ  ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಪಟ್ಟಮ್ಮಾಳ್​ ವೀರಸ್ವಾಮಿ ಅವರನ್ನು ಫೆ.28ರ ಮುಂಜಾನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 6.30ರ ಸುಮಾರಿಗೆ ಅವರು ನಿಧನ ಹೊಂದಿದರು. ಬೆಳಗ್ಗೆ 10.30ಕ್ಕೆ ಪಾರ್ಥಿವ ಶರೀರವನ್ನು ರಾಜಾಜಿನಗರದ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ರವಿಚಂದ್ರನ್​

ಅಂತಿಮ ದರ್ಶನ ಪಡೆಯಲಿರುವ ಸೆಲೆಬ್ರಿಟಿಗಳು:
ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್​ ಕುಟುಂಬದವರು ನೀಡಿರುವ ಕೊಡುಗೆ ಅಪಾರ. ರವಿಚಂದ್ರನ್​ ತಂದೆ ವೀರಾಸ್ವಾಮಿ ಅವರು ಹಲವಾರು ಸಿನಿಮಾಗಳನ್ನು ನಿರ್ಮಿಸಿ ಜನಪ್ರಿಯರಾಗಿದ್ದರು. ರವಿಚಂದ್ರನ್​ ಕುಟುಂಬದಿಂದ ನಿರ್ಮಾಣ ಆದ ಸಿನಿಮಾಗಳಿಂದ ಭವಿಷ್ಯ ಕಟ್ಟಿಕೊಂಡ ಕಲಾವಿದರು ಮತ್ತು ತಂತ್ರಜ್ಞರ ಸಂಖ್ಯೆ ದೊಡ್ಡದಿದೆ. ಹಾಗಾಗಿ ಈ ಕುಟುಂಬದ ಮೇಲೆ ಎಲ್ಲರಿಗೂ ಅಪಾರ ಪ್ರೀತಿ, ಗೌರವ ಇದೆ. ಇಂದು ಬೆಳಗ್ಗೆ 10.30ರ ಬಳಿಕ ರವಿಚಂದ್ರನ್​ ನಿವಾಸದಲ್ಲಿ ಪಟ್ಟಮ್ಮಾಳ್​ ವೀರಸ್ವಾಮಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ನಮನ ಸಲ್ಲಿಸಲಿದ್ದಾರೆ.

ರವಿಚಂದ್ರನ್​ ಅವರ ತಾಯಿ ಹಲವು ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಈ ಬಗ್ಗೆ ಟಿವಿ9 ಸಂದರ್ಶನದಲ್ಲಿ ರವಿಚಂದ್ರನ್​ ಮಾತನಾಡಿದ್ದರು. ‘ಅಮ್ಮನಿಗೆ ಅಲ್ಜಮೈರ್​ ಆಗಿದೆ. ಎಲ್ಲರನ್ನೂ ಆಗಾಗ ಮರೆಯುತ್ತಾರೆ. ಆದರೆ ಯಾರನ್ನು ಮರೆತರೂ ನನ್ನನ್ನು ಮತ್ತು ನನ್ನ ಹೆಂಡತಿಯನ್ನು ಅವರು ಮರೆತಿಲ್ಲ. ನನ್ನ ಹೆಂಡತಿಯೇ ಅವರನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳುವುದು. ಅವಳಿಗೆ ಹ್ಯಾಟ್ಸ್​ ಆಫ್​ ಹೇಳಬೇಕು. ಎಲ್ಲವನ್ನೂ ಹಾಸಿಗೆಯಲ್ಲೇ ಮಾಡಿಕೊಳ್ಳುವ ಅಮ್ಮನನ್ನು ನಿಭಾಯಿಸುವುದು ಅಷ್ಟು ಸುಲಭ ಅಲ್ಲ. ನನ್ನ ಹೆಂಡತಿ ಒಂದು ದಿನವೂ ಬೇಸರ ಮಾಡಿಕೊಂಡಿಲ್ಲ’ ಎಂದು ರವಿಚಂದ್ರನ್​ ಹೇಳಿದ್ದರು.

WhatsApp
Facebook
Telegram
error: Content is protected !!
Scroll to Top