ಕುಮಟಾ;ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಸಾವು.!

ಕುಮಟಾ: ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಮೂರೂರಿನ ಅಂಗಡಿಕೇರಿಯಲ್ಲಿ ನಡೆದಿದೆ. ಮೂರೂರು ಸಮೀಪದ ಕರ್ಕಿಮಕ್ಕಿನಿವಾಸಿ ಈಶ್ವರಯಂಕು ಗೌಡ(29) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ಕೋಳಿ ಅಂಗಡಿಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ.

ಹೀಗಾಗಿ ಆತಂಕಗೊoಡ ಜನರು ವಿಚಾರಿಸಿದ್ದು, ಈ ವೇಳೆ ಹೊಳೆಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

WhatsApp
Facebook
Telegram
error: Content is protected !!
Scroll to Top