ಕಾಲು ನೋವಿನ ಬಾಧೆ ತಾಳದೆ ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ..!

(ರಾಜ್ಯ): ನೇಣುಹಾಕಿಕೊಂಡು ಅಥವಾ ವಿಷ ಕುಡಿದು, ನದಿಗೋ, ಭಾವಿಗೋ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ ನ್ನ ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾನೆ.

ಹೌದು.. ಕಾಲುನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಲಕ್ಷಣ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ. ಗ್ಯಾನಪ್ಪ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಳೆದ ಹಲವು ದಿನಗಳಿಂದ ಈತನಿಗೆ ಕಾಲು ನೋವು ಕಾಣಿಸಿಕೊಂಡಿತ್ತು. ಆಗ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಂಡಿದ್ದಾನೆ. ನೋವು ಕಡಿಮೆಯಾಗಿ ಬಳಿಕ ಕಾಲಿಗೆ ಗ್ಯಾಂಗ್‌ರಿನ್ ಉಂಟಾಗಿ ಕಾಲು ನೋವಿನ ಜತೆ ಕಾಲು ಸಹ ಕೊಳಯುತ್ತಾ ಬಂದಿದೆ.ಈ ಆರೋಗ್ಯ ಸಮಸ್ಯೆಗೆ ಹೆಚ್ಚಿನ ಹಣವನ್ನ ವ್ಯಯ ಮಾಡಲು ಸಾಧ್ಯವಾಗದ ಕಾರಣ ಮನೆಯಲ್ಲಿ ಮರ್ಮಾಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಕವಿತಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp
Facebook
Telegram
error: Content is protected !!
Scroll to Top