ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ..!

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಪೋಕ್ಸೋ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.  

ನಾಲ್ವರು ಆರೋಪಿಗಳ ಬಂಧನ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಶೀದ್ ಸಾಹೇಬ್(73), ಮೊಹಮ್ಮದ್ ಆಲಿ(74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ(62) ಹಾಗೂ ಇಸ್ಮಾಯಿಲ್(41) ಬಂಧಿತರು. ಗ್ರಾಹಕರ ರೀತಿಯಲ್ಲಿ ಬಂದು ಈ ನಾಲ್ವರು ಆರೋಪಿಗಳು ವಿದ್ಯಾರ್ಥಿನಿಗೆ ಲೈಂಗಿಕ ‌ಕಿರುಕುಳ ನೀಡಿದ್ದರು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ನಂದಿಗುಡ್ಡ ರಿಯಾನಾ ರೆಸಿಡೆನ್ಸಿ ಅಪಾರ್ಟ್ಮೆಂಟ್‌ನ ಪೆಂಟ್ ಹೌಸ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಬೆಳಕಿಗೆ ಬಂದಿತ್ತು. ಮಂಗಳೂರಿನ ಸಿಸಿಬಿ ಪೊಲೀಸರು ಪ್ರಕರಣದ ಬೆನ್ನು ಬಿದ್ದು ತನಿಖೆ ನಡೆಸಿದ್ದರು. ಈ ಸಂಬಂಧ ಇದೀಗ 5 ಪ್ರಕರಣಗಳನ್ನು ದಾಖಲಿಸಿ 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.

WhatsApp
Facebook
Telegram
error: Content is protected !!
Scroll to Top