ಕುರ್ಕುರೆ, ಚಕ್ಕುಲಿ ಪ್ಯಾಕೆಟಲ್ಲಿ ಡ್ರಗ್ಸ್‌ ತುಂಬಿಸಿ ಮಾರಾಟ..!

ಬೆಂಗಳೂರು:  ಖಾದ್ಯ ತಿನಿಸು ಪೊಟ್ಟಣಗಳಲ್ಲಿ ಗಾಂಜಾ ತುಂಬಿ ಗ್ರಾಹಕರಿಗೆ(Customers) ಮಾರಾಟ ಮಾಡುತ್ತಿದ್ದ ಚಾಲಾಕಿ ಪೆಡ್ಲರ್‌ವೊಬ್ಬ ಸಿಸಿಬಿ ಪೊಲೀಸರ(CCB Police) ಬಲೆಗೆ ಬಿದ್ದಿದ್ದಾನೆ. ಮೈಕೋ ಲೇಔಟ್‌ ಸಮೀಪದ ನಿವಾಸಿ ಗೋಳಕ್‌ ಬೆಹೇರಾ ಬಂಧಿತ(Arrest). ಆರೋಪಿಯಿಂದ(Accused) 8 ಲಕ್ಷ ಮೌಲ್ಯದ ಗಾಂಜಾ(Marijuana) ಹಾಗೂ .60 ಸಾವಿರ ನಗದು ಜಪ್ತಿ ಮಾಡಲಾಗಿದೆ. ಒಡಿಶಾ ಮೂಲದ ಗೋಳಕ್‌, ಕಳೆದ ಎಂಟು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದ. ತನ್ನೂರಿನಿಂದ ಗಾಂಜಾ ತಂದು ನಗರದಲ್ಲಿ ಆರೋಪಿ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ತನ್ನೂರಿನಲ್ಲಿ ಕಡಿಮೆ ಬೆಲೆಗೆ ಸಿಗುತ್ತಿದ್ದ ಗಾಂಜಾವನ್ನು ಆರೋಪಿ, ಚಕ್ಕುಲಿ, ಕುರ್ಕುರೆ ಹೀಗೆ ತಿನಿಸುಗಳ ಪೊಟ್ಟಣಗಳಲ್ಲಿ ಗಾಂಜಾ ತುಂಬಿ ಗ್ರಾಹಕರಿಗೆ ಪೂರೈಸುತ್ತಿದ್ದ. ನಗರದಲ್ಲಿ(Bengaluru) ನೆಲೆಸಿರುವ ಒಡಿಶಾ ಮೂಲದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಆತ ದಂದೆ ನಡೆಸುತ್ತಿದ್ದ. ತಲಾ 5 ಗ್ರಾಂಗೆ ಕಾರ್ಮಿಕರಿಗೆ .500ಗೆ ಮಾರುತ್ತಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಈ ದಂಧೆಗೆ ವಿವಿಧ ಕಂಪನಿಗಳ ಖಾದ್ಯ ತಿನಿಸುಗಳ ಕವರ್‌ಗಳನ್ನು ಆತ ಸಂಗ್ರಹಿಸುತ್ತಿದ್ದ. ಬಳಿಕ ಅವುಗಳಲ್ಲಿ ಗಾಂಜಾ ತುಂಬಿ ಸೆಲ್ಲೊ ಟೆಪ್‌ ಹಾಕಿ ಪ್ಯಾಕ್‌ ಮಾಡಿದ ನಂತರ ಆತ, ಒಡಿಶಾದಿಂದ ನಗರಕ್ಕೆ ರೈಲಿನಲ್ಲಿ ಸಾಗಿಸುತ್ತಿದ್ದ. ಮೇಲ್ನೋಟಕ್ಕೆ ಖಾದ್ಯ ತಿನಿಸು ಪೊಟ್ಟಣಗಳಂತೆ ಕಾಣುತ್ತಿದ್ದರಿಂದ ಸಲುಭವಾಗಿ ರೈಲಿನ ಪಯಣದ ವೇಳೆ ಪೊಲೀಸರನ್ನು ಸಹ ಆರೋಪಿ ಸುಲಭವಾಗಿ ಕಣ್ತಪ್ಪಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

WhatsApp
Facebook
Telegram
error: Content is protected !!
Scroll to Top