ಕನ್ನಡ ಭಾಷೆ ಕಲಿಕೆ ಕಡ್ಡಾಯವಲ್ಲ ಎಂದ ಕೇಂದ್ರ: ಕಾಂಗ್ರೆಸ್ ಕಾರ್ಯಕರ್ತರಿಗೆ ಭರ್ಜರಿ ಆಫರ್..!

ಪದವಿ ಹಂತದಲ್ಲಿ ಕನ್ನಡ ಭಾಷೆ (Kannada Language) ಕಡ್ಡಾಯ ವಿಚಾರದ ಚರ್ಚೆ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಾದ-ವಿವಾದ, ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ನೂತನ ಶಿಕ್ಷಣ ನೀತಿಯ ಅನ್ವಯ ಶಿಕ್ಷಣದಲ್ಲಿ ಕೆಲವು ಬದಲಾವಣೆ ತರಲು ಸರ್ಕಾರ ಮುಂದಾಗಿತ್ತು. ತನ್ನ ನಿಲುವನ್ನು ಸಹ ತಿಳಿಸಿತ್ತು. ಇದೀಗ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (NEP) -2020 ಹಾಗೂ ಅದರ ನಿಯಮಗಳಲ್ಲಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಕೇಂದ್ರ ಸರಕಾರವು (Central Government), ಹೈಕೋರ್ಟ್ನಲ್ಲಿ (High Court) ಸ್ಪಷ್ಟಪಡಿಸಿದೆ. ಇದರಿಂದಾಗಿ ಪದವಿ ಹಂತದಲ್ಲಿ ಒಂದು ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯಗೊಳಿಸುವ ರಾಜ್ಯ ಸರಕಾರದ ಆಶಯಕ್ಕೆ ಹಿನ್ನಡೆಯಾಗಿದೆ. ಅಷ್ಟೇ ಅಲ್ಲದೆ, ಕನ್ನಡ ಕಲಿಕೆ ಕಡ್ಡಾಯಗೊಳಿಸುವ ನಿಲುವನ್ನು ಮರು ಪರಿಶೀಲಿಸಲು ರಾಜ್ಯ ಸರಕಾರಕ್ಕೆ ಮತ್ತೆ ನಿರ್ದೇಶನ ನೀಡಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ.

ಇನ್ಮುಂದೆ ವರ್ಷದಲ್ಲಿ 2 ಬಾರಿ ನಡೆಯಲಿದೆ K-TET ಪರೀಕ್ಷೆ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KAR-TET) ಯನ್ನು 2023ನೇ ಸಾಲಿನಿಂದ ಎರಡು ಬಾರಿ (Two Time) ಅಂದರೆ, ಜನವರಿ ಹಾಗೂ ಜೂನ್ ತಿಂಗಳಲ್ಲಿ ನಡೆಸಲು ಸೂಚಿಸಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಶಿವಕುಮಾರ್ (Shivakumar) ಆದೇಶ ಹೊರಡಿಸಿದ್ದು, ವರ್ಷಕ್ಕೆ ಎರಡು ಸಲ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ (Education Department) ಆಯುಕ್ತರಿಗೆ ನಿರ್ದೇಶಿಸಿದ್ದಾರೆ. ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಮಾದರಿಯಲ್ಲೇ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಹಲವು ಕಾರಣದಿಂದಾಗಿ ಪ್ರತಿ ವರ್ಷವೂ ಟಿಇಟಿ ಪರೀಕ್ಷೆಯು (Exam) ವಿಳಂಬವಾಗುತ್ತಿದೆ.

ಕಾಂಗ್ರೆಸ್ ಕಾರ್ಯಕರ್ತರಿಗೆ ಭರ್ಜರಿ ಆಫರ್
ಕಳೆದ ಕೆಲ ಸಮಯದಿಂದ ಸೂಕ್ಷ್ಮವಾಗಿ ಗಮನಿಸಿದರೆ ಹಿಂದೊಮ್ಮೆ ಏಕ ಅಧಿಪತ್ಯದಂತಿದ್ದ ರಾಷ್ಟ್ರಮಟ್ಟದ ಕಾಂಗ್ರೆಸ್ (Congress) ಪಕ್ಷವು ತನ್ನ ವರ್ಚಸ್ಸನ್ನು ಗಮನಾರ್ಹವಾದ ಪ್ರಮಾಣದಲ್ಲಿ ತಗ್ಗಿಸಿಕೊಂಡಿರುವುದು ನಿಸ್ಸಂದೇಹವಾಗಿ ತಿಳಿದುಬರುತ್ತದೆ. ದೇಶದ ಕೆಲವೇ ಕೆಲವು ಬೆರಳಣಿಕೆಯಷ್ಟು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್, ಇತರ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಆಡಳಿತದಲ್ಲಿರುವುದನ್ನು ಕಾಣಬಹುದು. ಅದರಂತೆ ಕರ್ನಾಟಕದಲ್ಲಿ ಹಿಂದಿನ ಸರ್ಕಾರ ರಚಿಸಿದ್ದ ಕಾಂಗ್ರೆಸ್ ಈ ಬಾರಿಯೂ ಮತ್ತೆ ಕರ್ನಾಟಕದಲ್ಲಿ (Karnataka) ಬರಲೇಬೇಕೆಂಬ ಆಸೆಯನ್ನು ಹೊತ್ತಿದೆ. ಹಾಗಾಗಿ, ಸದ್ಯ ಕಾಂಗ್ರೆಸ್ ತನ್ನ ಪಕ್ಷದ ವರ್ಚಸ್ಸನ್ನು ಪುನರ್ಸ್ಥಾಪಿಸಲು ಮುಂದಾಗಿದ್ದು ಅದಕ್ಕಾಗಿ ಹಲವಾರು ಬಗೆಯ ತಂತ್ರ-ರಣತಂತ್ರಗಳನ್ನು ರೂಪಿಸುವಲ್ಲಿ ನಿರತವಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್(DK Shivakumar) ಸ್ವತಃ ಈ ನಿಟ್ಟಿನಲ್ಲಿ ಪ್ರಕ್ರಿಯೆಗಳ ಮೇಲ್ವಿಚಾರಣೆಯಲ್ಲಿ ತೊಡಗಿಕೊಂಡಿದ್ದು, ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದಾರೆ.

WhatsApp
Facebook
Telegram
error: Content is protected !!
Scroll to Top