ನರ್ಸ್ ಸಮವಸ್ತ್ರದಲ್ಲಿ ಬಂದು ನವಜಾತ ಶಿಶು ಅಪಹರಣ; ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡುಮಗು ಕಳ್ಳತನ!

ಹಾಸನ: ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಗಂಡು ಮಗು ಅಪಹರಣ ಮಾಡಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಅಸ್ಸಾಂನ ಕೂಲಿ ಕಾರ್ಮಿಕ ಮಹಿಳೆಯ ಶಿಶು ಅಪಹರಣ ಮಾಡಲಾಗಿದೆ. ನರ್ಸ್ ಸಮವಸ್ತ್ರದಲ್ಲಿ ಬಂದು ಮಧ್ಯರಾತ್ರಿ ಶಿಶು ಅಪಹರಣ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ಹಿಂಬಾಗಿಲಿನಿಂದ ಬಂದು ಮಗು ಅಪಹರಿಸಿ ಪರಾರಿ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ, ಆಸ್ಪತ್ರೆಯ ಸಿಸಿ ಟಿವಿ ಕ್ಯಾಮರಾದಲ್ಲಿ ಕಳ್ಳರ ಕೈಚಳಕ ಸೆರೆ ಆಗಿದೆ. ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ದೀಪಕ್​ರಿಂದ ದೂರು ನೀಡಲಾಗಿದೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮಹಿಳೆ ನಿನ್ನೆ ಸಂಜೆ ಏಳು ಗಂಟೆ ವೇಳೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅಸ್ಸಾಂ ಮೂಲದ ಕೂಲಿ ಕಾರ್ಮಿಕ ಮಹಿಳೆ ಅರಕಲಗೂಡು ತಾಲ್ಲೂಕು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಮಧ್ಯೆ, ರಾತ್ರಿ ಏಳು ಗಂಟೆ ಸುಮಾರಿಗೆ ಆಸ್ಪತ್ರೆಗೆ ಎಂಟ್ರಿಯಾಗಿದ್ದ ಚೋರರು, ಕೆಲಹೊತ್ತು ಹೊಂಚು ಹಾಕಿ ತಡರಾತ್ರಿ 12 ಗಂಟೆ ವೇಳೆಗೆ ಹೆರಿಗೆ ವಾರ್ಡ್​ಗೆ ತೆರಳಿ ಹಸುಗೂಸು ಹೊತ್ತೊಯ್ದಿದ್ದಾರೆ. ನರ್ಸ್ ಸಮವಸ್ತ್ರ ಧರಿಸಿ ಹೊಂಚು ಹಾಕಿ ಮಗು ಎಸ್ಕೇಪ್ ಮಾಡಲಾಗಿದೆ. ಆಸ್ಪತ್ರೆ ಹಿಂಭಾಗದ ಬಾಗಿಲಿನಿಂದ ಮಗು ಅಪಹರಿಸಿ ಪರಾರಿಯಾಗಿದ್ದಾರೆ.

WhatsApp
Facebook
Telegram
error: Content is protected !!
Scroll to Top