ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ನಟ ಚೇತನ್

ಚೇತನ್ ಹೇಳಿಕೆ ಕೇವಲ ಪಬ್ಲಿಸಿಟಿ ಸ್ಟಂಟೆ ಅಥವಾ ಭೂತ ಕೋಲ ನಿಜವಾಗಿಯು ಹಿಂದೂ ಸಂಸ್ಕçತಿಗೆ ಸೇರಿದ್ದಲ್ಲವೆ? ತುಳುನಾಡ ದೈವ ಉತ್ತರಿಸಿತೆ?

ರಿಷಬ್‌ ಶೆಟ್ಟಿ (Rishabh Shetty) ನಟನೆಯ ಕಾಂತಾರ (Kantara) ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಆದರೆ ಇದಕ್ಕೆ ವ್ಯಕ್ತಿರಿಕ್ತವಾಗಿ ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ (Chetan Ahimsa) ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.

ಕಾಂತಾರ ಕನ್ನಡ ಭಾಷೆಯಲ್ಲಿ ಮಾತ್ರವಲ್ಲದೇ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲೂ ಯಶಸ್ವಿ ಪ್ರದರ್ಶನ ಕಾಣ್ತಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕೇವಲ ಸ್ಯಾಂಡಲ್ ವುಡ್‌ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, `ಕಾಂತಾರ’ದ ಕಾಂತಿಯಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ `ಡಿವೈನ್ ಸ್ಟಾರ್’ ಎಂದು ಬಿರುದು ಕೊಟ್ಟಿದ್ದು, ಅದೇ ಹೆಸರಿನಿಂದ ಕರೆಯುತ್ತಿದ್ದಾರೆ.

ಕಾಂತಾರ’ (Kantara) ಕುರಿತು ವ್ಯಕ್ತಿರಿಕ್ತವಾಗಿ ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ (Chetan Ahimsa), ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.

WhatsApp
Facebook
Telegram
error: Content is protected !!
Scroll to Top