Bhatkala News : ಸರ್ಕಾರದ ದುಡ್ಡಿನಲ್ಲಿ ತಮ್ಮಫಾರ್ಮ್ಗೆ ರಸ್ತೆ ಮಾಡಿಕೊಂಡ ಸುನೀಲ್ ನಾಯ್ಕ: ಲೋಕಾಯುಕ್ತಕ್ಕೆ ದೂರು

ಭಟ್ಕಳದ ಶಾಸಕ ಸುನೀಲ್ ನಾಯ್ಕ ಅವರ ವಿರುದ್ಧ ಸರ್ಕಾರದ ಹಣವನ್ನು ಖಾಸಗಿ ಉಪಯೋಗಕ್ಕೆ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಲೋಕಾಯುಕ್ತಕ್ಕೆ ದೂರು (Bhatkala News) ನೀಡಲಾಗಿದೆ.

ಭಟ್ಕಳ: ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಭಟ್ಕಳ ಶಾಸಕ (Bhatkala News) ಸುನೀಲ್ ನಾಯ್ಕ ಹಾಗೂ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಭಟ್ಕಳ ತಾಲೂಕು ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ ಅವರು ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಣವನ್ನು ಅಧಿಕಾರಿಗಳೊಂದಿಗೆ ಶಾಮೀಲಾಗಿ ದುರುಪಯೋಗಪಡಿಸಿಕೊಂಡ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2023ರ ಜ.3 ರಂದು 40 ಲಕ್ಷ ರೂ. ಹಣ ಬಿಡುಗಡೆಯಾಗಿತ್ತು. ಶಾಸಕ ಸುನೀಲ್ ನಾಯ್ಕ ಅವರು 516.90 ಮೀಟರ್ ಉದ್ದ ಹಾಗೂ 3.70 ಮೀಟರ್ ಅಗಲದ ಕಾಂಕ್ರೀಟ್ ರಸ್ತೆಯನ್ನು ಸಾರ್ವಜನಿಕ ಉಪಯೋಗಕ್ಕೆ ಎಂದು ದಾಖಲೆಗಳಲ್ಲಿ ತೋರಿಸಿದ್ದರು. ಆದರೆ ಅದನ್ನು ತಮ್ಮ ಮಾಲ್ಕಿ ಜಾಗದಲ್ಲಿ ಸ್ವಂತ ಉಪಯೋಗದ ರಸ್ತೆಗೆ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ.

WhatsApp
Facebook
Telegram
error: Content is protected !!
Scroll to Top