ಉತ್ತರ ಕನ್ನಡ ಇತಿಹಾಸದಲ್ಲೆ  ಸರಕಾರದ ವತಿಯಿಂದ ಮುರ್ಡೆಶ್ವರದಲ್ಲಿ ಮಹಾ ಶಿವರಾತ್ರಿ ಆಚರಣೆ

ಸಚಿವ ಮಂಕಾಳು ವೈದ್ಯರ  ಆದೇಶದಂತೆ ಪ್ರಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಸರಕಾರದ ವತಿಯಿಂದ ಮಹಾ ಶಿವರಾತ್ರಿ ಆಚರಣೆ

ಭಟ್ಕಳ :ಸಚಿವ ಮಂಕಾಳು ವೈದ್ಯರ ಆಶಯದಂತೆ ಅವರ‌ ತವರೂರಾದ  ಮುರುಡೇಶ್ವರದಲ್ಲಿ ಪ್ರಪಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ  ಮಹಾಶಿವರಾತ್ರಿ ಆಚರಣೆ ಹಮ್ಮಿಕೊಳ್ಳಲಾಗಿದ್ದು ಈ  ನಿಮಿತ್ತ ರಾಜ್ಯಮಟ್ಟದ ಕಲಾವಿದರಿಂದ ಭಜನೆ, ನೃತ್ಯ, ಭರತ ನಾಟ್ಯ ಸೇರಿದಂತೆ ಗುಣಮಟ್ಟದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ  ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಅವರು ಮಾರ್ಚ ೮ ರಂದು ಮುರುಡೇಶ್ವರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ನಡೆಸಲಾಗುವ ಸಾಂಸ್ಕçತಿಕ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ಬಗ್ಗೆ ಗುರುವಾರ ಸಂಜೆ ಭಟ್ಕಳ ಉಪವಿಭಾಗಾದಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದರು.
ಮಹಾಶಿವರಾತ್ರಿ ದಿನದಂದು ಸಂಜೆ ೬ ಗಂಟೆಯಿAದ ಬೆಳಿಗ್ಗೆ ವರೆಗೆ .ವಿವಿವಧ ಸಾಂಸ್ಕçತಿಕ ಕಾರ್ಯಕ್ರಮವನ್ನು ನಡೆಸಬೇಕಾಗಿದ್ದು ಇದಕ್ಕೆ ಅಗತ್ಯ ಮುಂಜಾಗ್ರತಾ ಸಿದ್ಧತೆಗಳನ್ನು ಮಾಡಬೇಕಾಗಿದೆ. ಕಾರ್ಯಕ್ರಮವನ್ನು ಸಂಪೂರ್ಣ ಪ್ರಾಯೋಜಕರು ಹಾಗೂ ಧಾನಿಗಳ ಸಹಾಯದಿಂದ ಮಾಡಲು ತೀರ್ಮಾನಿಸಿದ್ದು ಅತ್ಯುತ್ತಮವಾಗಿ ಆಯೋಜನೆ ಮಾಡಿ ಜನರಿಂದ ಪ್ರತಿ ವರ್ಷ ಇಂತಹ ಕಾರ್ಯಕ್ರಮ ನಡೆಯಲಿ ಎನ್ನುವ ಮಟ್ಟಿಗೆ ಸಾರ್ವಜನಿಕರಿಂದ ಪ್ರಶಂಸೆ ಬರುವಂತಾಗಬೇಕು ಎಂದು ಹೇಳಿದ ಅವರು ಜಿಲ್ಲೆಯಾದ್ಯಂತ ಈ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಮಾಡುವಂತೆ ಪ್ರವಾಸೋಧ್ಯಮ ಅಧಿಕಾರಿಗೆ ತಿಳಿಸಿದರು.
ಆಯಾ ಇಲಾಖೆಯ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಚಾಚೂ ತಪ್ಪದೇ ನಿಭಾಯಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡಬೇಕಿದೆ. ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಪ್ರವಾಸಿಗರು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮಕ್ಕೆ ಆಗಮಿಸುವಂತೆ ಮಾಡಬೇಕು. ಪ್ರವಾಸೋದ್ಯಮ ಇಲಾಖೆ ಸ್ಥಳೀಯ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಿದ್ಧತಾ ಕಾರ್ಯ ಆರಂಭಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪದೋಷ ಉಂಟಾಗದAತೆ ಗಮನ ಹರಿಸಬೇಕು ಎಂದ ಅವರು ಕುಡಿಯುವ ನೀರು, ಸ್ವಚ್ಛತೆ, ಭದ್ರತೆ ಸಮರ್ಪಕವಾಗಬೇಕು. ಎಂದರಲ್ಲದೇ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಅಲ್ಲಿ ಮಾಡಬೇಕಾದ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದರು. ಕಾರ್ಯಕ್ರಮ ನಡೆಸಲು ಯಾವುದು ಸೂಕ್ತ ಸ್ಥಳ ಎನ್ನುವುದರ ಬಗ್ಗೆ ಮೊದಲು ನಿರ್ಧರಿಸಬೇಕು. ಎಲ್ಲರ ಸಹಕಾರದಿಂದ ಶಿವರಾತ್ರಿ ಪ್ರಯುಕ್ತ ಶಿವತಾಣದಲ್ಲಿ ವಿಜ್ರಂಭಣೆ ಕಾರ್ಯಕ್ರಮ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಸಹಾಯಕ ಆಯುಕ್ತೆ ಡಾ. ನಯನಾ, ಭಟ್ಕಳ ಉಪವಿಭಾಗದ ಡಿ.ವೈ.ಎಸ್.ಪಿ. ಮಹೇಶ, ತಹಸೀಲ್ದಾರ ತಿಪ್ಪೇಸ್ವಾಮಿ, ತಾಪಂ. ಪ್ರಭಾರ ಕಾರ್ಯನಿರ್ವಹಣಾದಿಕಾರಿ ವಿಡಿ ಮೊಗೇರ, ಮುರುಡೇಶ್ವರ ದೇವಸ್ಥಾನ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

WhatsApp
Facebook
Telegram
error: Content is protected !!
Scroll to Top