ಗೆದ್ದು ಬೀಗಿದ ವಿಶ್ವೇಶ್ವರ ಹೆಗಡೆ ಕಾಗೇರಿ: ಭಟ್ಕಳದಲ್ಲಿ ಸಂಭ್ರಮಾಚರಣೆ
ಭಟ್ಕಳ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ತಾಲೂಕಿನ ಮುಖ್ಯವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಾಜಿ ಶಾಸಕ ಸುನಿಲ್ ನಾಯ್ಕ ಇಂದು ನಮ್ಮ ಕಾರ್ಯಕರ್ತರಿಗೆ ಅವಿಸ್ಮರಣಿಯ ದಿನವಾಗಿದೆ. ಕಾರ್ಯಕರ್ತರ ಶ್ರಮದಿಂದಾಗಿ ಅತ್ಯಂತ ಹೆಚ್ಚು ಅಂತರದಿಂದ ನಮ್ಮ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದರು.
ಪಶ್ಚಿಮ ಘಟ್ಟಗಳ ಸಂರಕ್ಷಣಾ ಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರ ಜನತೆ ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಮತವನ್ನು ನೀಡಿದ್ದಾರೆ. ಎಲ್ಲಾ ಸಮಾಜದವರು ನರೇಂದ್ರ ಮೋದಿ ನೇತ್ರತ್ವದ ಸರ್ಕಾರವನ್ನು ಬಯಸಿ ಮತ ನೀಡಿದ್ದಾರೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗೋದು ಸೂರ್ಯಚಂದ್ರ ಇರುವಷ್ಟೇ ಸತ್ಯ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಸೋಲಿನಿಂದಾಗಿ ನಾವು ನೊಂದುಕೊಂಡಿದ್ದೇವು. ಗ್ಯಾರಂಟಿಯ ಪರಿಣಾಮ ಯಾವ ರೀತಿ ಪ್ರಭಾವ ಬಿರುತ್ತದೆ ಎಂಬ ಆತಂಕ ನಮ್ಮನ್ನು ಈಗಲೂ ಕಾಡುತ್ತಿತ್ತು. ಆದರೆ ಭಟ್ಕಳದ ಪ್ರಜ್ಞಾವಂತ ಮಹಿಳಾ ಮತದಾರರು ನಮ್ಮ ಅಬ್ಯರ್ಥಿಗೆ ಅಭೂತಪೂರ್ಣ ಗೆಲುವನ್ನು ದೊರಕಿಸಿಕೊಟ್ಟಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತಾಲೂಕಾ ಮಂಡಳ ಅಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ, ಶ್ರೀಕಾಂತ ನಾಯ್ಕ, ಈಶ್ವರ ನಾಯ್ಕ ಮತ್ತಿತರು ಇದ್ದರು.