ಭಾರಿ ಮಳೆಗಾಳಿಗೆ ಮನೆ ಮೇಲ್ಚಾವಣಿ ಧರಾಶಾಹಿ

ತಪ್ಪಿದ ಭಾರಿ ಅನಾಹುತ

ಭಟ್ಕಳ : ಸೋಮವಾರ ಸಂಜೆ ವೇಳೆ ಸುರಿದ ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ಸಂಪೂರ್ಣ ಕುಸಿದು ಬಿದ್ದ ಪರಿಣಾಮ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಿ ದುರ್ಗಪ್ಪ ನಾಯ್ಕ ಎಂಬುವವರಿಗೆ ಸೇರಿದ ಮನೆಯಾಗಿದೆ. ಇಂದು ಸಂಜೆ ವೇಳೆ ಕೆಲ ಸಮಯ ಸುರಿದ ಗಾಳಿ ಮಳೆಯಿಂದಾಗಿ ಈ ಘಟನೆ ಸಂಭವಿಸಿದ್ದು. ಮನೆ ಮೇಲ್ಚಾವಣಿ ಕುಸಿದ ಹಿನ್ನೆಲೆ ಕೆಲವೆಡೆ ಗೋಡೆಯಲ್ಲಿ ಬಿರಿಕು ಕಾಣಿಸಿಕೊಂಡಿದೆ. ಘಟನೆ ವೇಳೆ ಮನೆಯವರು ಪಕ್ಕದ ಕೋಣೆಯಲ್ಲಿ ಇದ್ದ ಕಾರಣ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಸ್ಥಳಕ್ಕೆ ಮುಟ್ಟಳ್ಳಿ ಗ್ರಾಮ ಪಂಚಾಯತ ಗ್ರಾಮ ಆಡಳಿತ ಅಧಿಕಾರಿ ಹಾಗೂ ಗ್ರಾಮ ಸಹಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

WhatsApp
Facebook
Telegram
error: Content is protected !!
Scroll to Top