ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಸಹಯೋಗದಲ್ಲಿ ವೈದ್ಯಕೀಯ ಶಿಬಿರ ಸಂಪನ್ನ

ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೆಯ ಡಾ ಲಕ್ಷ್ಮಿಶ್ ಅವರಿಗೆ ಸನ್ಮಾನ

ಭಟ್ಕಳ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ಏರ್ಪಡಿಸಲಾದ ವೈದ್ಯಕೀಯ ಶಿಬಿರವನ್ನು ಕೆ ಎಸ್ ಹೆಗ್ಡೆ ಆಸ್ಪತ್ರೆಯ ಖ್ಯಾತ ಎಲುಬು ಮತ್ತು ಕೀಲು ತಜ್ಞ ಡಾ. ವಿಕ್ರಮ್ ಶೆಟ್ಟಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಕೆ ಎಸ್ ಹೆಗ್ಡೆ ಆಸ್ಪತ್ರೆ 1200 ಹಾಸಿಗೆಯ ಬೃಹತ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿದ್ದು, ಇಲ್ಲಿ ಕಡಿಮೆ ದರದಲ್ಲಿ ಎಲ್ಲಾ ರೀತಿಯ ಅತ್ಯಾಧುನಿಕ ಚಿಕಿತ್ಸೆ ಲಭ್ಯವಿದೆ. ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಅನುಕೂಲವಾಗಲು ಆಸ್ಪತ್ರೆಯಿಂದ ಹಲವು ವೈದ್ಯಕೀಯ ಶಿಬಿರ ಏರ್ಪಡಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ಜನತೆ ಪಡೆಯಬೇಕು. ಆಸ್ಪತ್ರೆಯಲ್ಲಿ ಕ್ಷೇಮ ಹೆಲ್ತ ಕಾರ್ಡ ವಿಮಾ ಯೋಜನೆ ಇದ್ದು, ಜನತೆ ಇದರ ಸದುಪಯೋಗವನ್ನೂ ಕೂಡ ಪಡೆಯಬಹುದಾಗಿದೆ. ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ನಮ್ಮ ಆಸ್ಪತ್ರೆಯ ವೈದ್ಯಕೀಯ ಶಿಬಿರ ಆಯೋಜಿಸಿರುವುದು ಸ್ಥಳೀಯ ಜನತೆಗೆ ಅನುಕೂಲವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೇಯ ಪಿಜಿಷೀಯನ್ ಡಾ ಲಕ್ಷ್ಮೀಶ್ ಅವರು ತಾಲೂಕ ಆಸ್ಪತ್ರೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗಮನಿಸಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು ವಿಕ್ಷಕರೆ ಇಲ್ಲಿ ಮುಖ್ಯವಾಗಿ ಗಮನಿಸ ಬೇಕಾದ ಅಂಶವೆಂದರೆ ತಾಲೂಕ ಆಸ್ಪತ್ರೆಯಲ್ಲಿ ಉತ್ತಮ ಸೇವೆಗೆ ಹೆಸರುವಾಸಿ ಹಾಗೆ ಸಾರ್ವಜನಿಕರು ಆಸ್ಪತ್ರೆಯಲ್ಲಿ ಬಂದು ಮೊದಲು ಹುಡುಕುವುದೆ ಈ ಡಾ :ಲಕ್ಷ್ಮಿಶ್ ಅವರನ್ನು ಎಂಬುವುದು ಸಾರ್ವಜನಿಕರ ಮಾತಾಗಿದೆ ಭಟ್ಕಳ ತಾಲೂಕ ಆಸ್ಪತ್ರೆಯ ಹೆಮ್ಮೆ ಡಾ ಲಕ್ಷ್ಮಿಶ್ ಎಂಬ ಮಾತುಗಳು ವೈದ್ಯಕೀಯ ಶಿಬಿರದಲ್ಲಿ ಕೇಳಿ ಬಂತು

ಈ ಸಂದರ್ಬದಲ್ಲಿ ಡಾ ಲಕ್ಷ್ಮಿಶ್ ಮಾತನಾಡಿ

ನಮ್ಮ ಆಸ್ಪತ್ರೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ ಎಸ್ ಹೆಗ್ಡೆ ಆಸ್ಪತ್ರೆಯವರು ವೈದ್ಯಕೀಯ ಶಿಬಿರ ಏರ್ಪಡಿಸಿರುವುದು ಇಲ್ಲಿನ ಜನತೆಗೆ ಅನುಕೂಲವಾಗಿದೆ. ಕೆ ಎಸ್ ಹೆಗ್ಡೆ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಉತ್ತಮ ಆಸ್ಪತ್ರೆ ಆಗಿದೆ . ಭಟ್ಕಳ ಪತ್ರರ್ಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕ್ರಿಯಾಶೀಲ ಗೆಳೆಯರ ಸಂಘ ನೇತೃತ್ವದಲ್ಲಿ ಅರ್ಥೋಗೆ ಸಂಬಂಧಿಸಿದ ವೈದ್ಯಕೀಯ ಶಿಬಿರ ನಡೆಸಿರುವುದು ಜನರು ಇದರ ಸದುಪಯೋಗ ಪಡೆಯಲು ಅನುಕೂಲವಾಗಿದೆ ಎಂದರು.

ವೇದಿಕೆಯಲ್ಲಿ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ರಾಧಾಕೃಷ್ಣ ಭಟ್ಟ, ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ, ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ, ಉಪಾಧ್ಯಕ್ಷ ವಿಷ್ಣು ದೇವಡಿಗ, ಕ್ರಿಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ದೀಪಕ ನಾಯ್ಕ, ಪ್ರಧಾನ ಕಾರ್ಯದರ್ಶಿ ಪಾಂಡುರಂಗ ನಾಯ್ಕ, ಕೆ ಎಸ್ ಹೆಗ್ಡೆ ಆಸ್ಪತ್ರೆ ಮಾರ್ಕೆಟಿಂಗ್ ವಿಭಾಗದ ಜೈಸನ್ ಇದ್ದರು. ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಖಚಾಂಚಿ ಮೋಹನ ನಾಯ್ಕ ಸ್ವಾಗತಸಿ, ನಿರೂಪಿಸಿ, ವಂದಿಸಿದರು. ಶಿಬಿರದಲ್ಲಿ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರು ಪಾಲ್ಗೊಂಡಿದ್ದು, ತಾಲ್ಲೂಕಿನ ವಿವಿಧ ಭಾಗದ 200ಕ್ಕೂ ಅಧಿಕ ಜನರು ಪಾಲ್ಗೊಂಡು ವೈದ್ಯರಿಂದ ತಪಾಸಿಸಿಕೊಂಡರು.

WhatsApp
Facebook
Telegram
error: Content is protected !!
Scroll to Top