ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಮಾಂಕಾಳು ವೈದ್ಯ
ಭಟ್ಕಳ :ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ) ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕಮಲಾವತಿ & ರಾಮನಾಥ ಶಾನಭಾಗ ಸಭಾಭವನದಲ್ಲಿ ಸಚಿವ ಮಾಂಕಾಳು ವೈದ್ಯರು ಉದ್ಘಾಟಿಸಿದರು
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕಲಿಕೆಗೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸರಕಾರದ ವತಿಯಿಂದ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ನನ್ನ ಮೊದಲ ಆಧ್ಯತೆ ಶಿಕ್ಷಣಕ್ಕೆ ಎಲ್ಲರೂ ಸಮಾಜದಲ್ಲಿ ಶಿಕ್ಷತರಾಗುದರ ಜೊತೆಗೆ ತಮ್ಮಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಹಾಗೆ ಮಾಡಿದಾಗ ಮಾತ್ರ ನಾವು ಪಡೆದ ಶಿಕ್ಷಣಕ್ಕೆ ಅರ್ಥ ಬರುತ್ತದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಸಾರ್ವಜನಿಕರು ಮುಂತಾದವರು ಉಪಸ್ಥಿತರಿದ್ದರು