ಮಂಗಳವಾರ, ಮಾರ್ಚ್ 13, 2025, ನವದೆಹಲಿ) – ಕರ್ನಾಟಕ ಹೈಕೋರ್ಟ್ ನಲ್ಲಿ 158 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಹೊರಡಿಸಿದ್ದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ತಡೆಹಿಡಿದಿದೆ.
ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯ ಮಹಾವಿಲೇಖನಾಧಿಕಾರಿ ಹಾಗೂ ಕಾರ್ಯದರ್ಶಿ ಕೆ.ಎಸ್. ಭರತ್ ಕುಮಾರ್ ಅವರ ಪ್ರಕಟಣೆಯ ಪ್ರಕಾರ, 2025ರ ಫೆಬ್ರವರಿ 10ರಂದು ಹೊರಡಿಸಲಾದ ಅಧಿಸೂಚನೆ ಸಂಖ್ಯೆ HCRB/CJR-1/2024 ತೀರ್ಪು ಪ್ರಕಟವಾಗುವವರೆಗೆ ಸ್ಥಗಿತಗೊಳ್ಳಲಿದೆ.
ಸುಪ್ರೀಂ ಕೋರ್ಟ್ ರಿಟ್ ಅರ್ಜಿ (ಸಿವಿಲ್) ಸಂಖ್ಯೆ 1022/1989 ಮತ್ತು ಸಂಬಂಧಿತ ಇತರ ಅರ್ಜಿಗಳ ವಿಚಾರಣೆ ನಡೆಯುವವರೆಗೆ ಈ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಈ ಪ್ರಕರಣ ಅಖಿಲ ಭಾರತ ನ್ಯಾಯಾಧೀಶರ ಸಂಘ ಮತ್ತು ಇತರರು Vs. ಭಾರತ ಸರ್ಕಾರ ಮತ್ತು ಇತರರು ಎಂಬ ಪ್ರಕರಣದ ಅಡಿ ಪರಿಗಣಿಸಲಾಗಿದೆ.
ಹೈಕೋರ್ಟ್ ಮುಂದಿನ ಆದೇಶದ ನಿರೀಕ್ಷೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ